ಬೆಳ್ತಂಗಡಿ : ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಸೆ.12ರಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಎಂದು ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ನೀಡಿದೆ.
ವಿಧವಾ ವೇತನ ಹೆಚ್ಚಳ ಕುರಿತಂತೆ ಪ್ರಸ್ತಾಪಿಸಿದೆ.