ಸಾಂದರ್ಭಿಕ ಚಿತ್ರ
ಚಿಕ್ಕೋಡಿ: ಅಶ್ಲೀಲ ಚಿತ್ರ ತೋರಿಸಿ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕನೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯೋರ್ವಳು ಸಂಜೆ ಅಳುತ್ತಾ ಮನೆಗೆ ಹೋಗಿದ್ದು, ಪೋಷಕರು ಬಾಲಕಿಯನ್ನು ಪ್ರಶ್ನಿಸಿದಾಗ ಕಾಮುಕ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ವಿಚಾರಿಸಿದಾಗ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು ಸದ್ಯ ಆರೋಪಿಯ ವಿರುದ್ಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.