ಬೆಂಗಳೂರು: ವಿಶೇಷಚೇತನ ವ್ಯಕ್ತಿಗೆ ಬಸ್ ಡಿಕ್ಕಿಯಾಗಿ ತಲೆಯ ಮೇಲೆ ಬಸ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ.17ರಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆದಿದೆ.
ತಡರಾತ್ರಿ ಸುಮಾರು 12:15ರ ಹೊತ್ತಿಗೆ ಬಸ್ ನಿಲ್ದಾಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಗೆ ವೇಗವಾಗಿ ಬಂದ ಬಸ್ ಡಿಕ್ಕಿಯಾಗಿದೆ. ಈ ವೇಳೆ ಅವರು ನೆಲಕ್ಕೆ ಬಿದ್ದಿದ್ದು, ತಲೆಯ ಮೇಲೆ ಬಸ್‌ನ ಮುಂದಿನ ಚಕ್ರ ಹರಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಜಾಗರೂಕತೆಯಿಂದ ಚಾಲನೆ ಮಾಡಿದ ಬಸ್ ಚಾಲಕ ಗೋಪಾಲ್ ಅವರನ್ನು ಉಪ್ಪಾರಪೇಟೆ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು, ಮೃತನ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.