ತಿರುಪತಿ ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ: ತುಪ್ಪದ ಗುಣಮಟ್ಟ ಪರೀಕ್ಷಿಸಲು ಸಮಿತಿ ರಚನೆ


ತಿರುಪತಿ: ತಿರುಪತಿಯಲ್ಲಿ ಪ್ರಸಾದವಾಗಿ ನೀಡುವ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಮಾಡಿರುವ ಆರೋಪ ಲ್ಯಾಬ್ ಪರೀಕ್ಷಾ ವರದಿ ಮೂಲಕ ಸತ್ಯ ಎಂದು ದೃಢ ಪಟ್ಟಿದೆ.

ಸೆ.19ರಂದು ಪತ್ರಿಕಾಗೋಷ್ಠಿಯಲ್ಲಿ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿದ ಟಿಡಿಪಿ ವಕ್ತಾರ ಆನಂ ವೆಂಕಟ ರಮಣ ರೆಡ್ಡಿ ಅವರು, “ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡುತ್ತಿರುವುದು ಖಚಿತವಾಗಿದೆ” ಎಂದರು.

ಸದ್ಯ ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ರಚಿಸಿದೆ. ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ತಿಳಿಸಿದ್ದಾರೆ.

error: Content is protected !!