ಚಿಕ್ಕಮಗಳೂರು: ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಪ್ರವಾಸಿ ಕಾರೊಂದು ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ 30 ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ಸೆ.21ರಂದು ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ಸಂಭವಿಸಿದೆ.
ದಟ್ಟ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದ್ದು ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬಹುತೇಕ ಜಖಂಗೊAಡಿದೆ. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಿಂದ ಜಾವಳಿ, ಸುಂಕಸಾಲೆ, ಹಿರೇಬೈಲು ಮಾರ್ಗವಾಗಿ ಕಳಸ – ಹೊರನಾಡಿಗೆ ಹೋಗುವ ಮಾರ್ಗವು ಎತ್ತರದ ಪ್ರದೇಶ ಹಾಗೂ ಕಾಫಿತೋಟಗಳ ಮಧ್ಯೆ ತಿರುವುಗಳಿಂದ ಕೂಡಿದ್ದು ಪ್ರವಾಸಿಗರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.