ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಧರ್ಮಸ್ಥಳ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ , ಪರಮಪೂಜ್ಯ ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಮತ್ತು ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ‘ಶೌರ್ಯ’ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯ ಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ಕಾರ್ಯಗಾರ ಬೆಳ್ತಂಗಡಿ ತಾಲೂಕಿನ ಉಜಿರೆ ಜಾಗೃತಿ ಸೌಧದಲ್ಲಿ ನಡೆಯಿತು.
ಕಾರ್ಯಗಾರವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಟೀಮ್ ಕಮಾಂಡರ್ ಶಾಂತಿಲಾಲ್ ಜಟಿಯಾರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರು ಶೌರ್ಯ ಕಾರ್ಯಕ್ರಮದ ಕುರಿತು ಆಶಯ ನುಡಿಗಳನ್ನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎಸ್. ಡಿ. ಎಮ್ ಮೆಡಿಕಲ್ ಟ್ರಸ್ಟ್ (ರಿ) ಧರ್ಮಸ್ಥಳ ಇದರ ಕಾರ್ಯದರ್ಶಿಗಳಾದ ಶಿಶುಪಾಲ್ ಪೂವಣಿರವರು ದೇಶ ಕಾಯುವ ಯೋಧರು ಸೈನಿಕರಾದರೆ ನಾಡ ಕಾಯುವ ಯೋಧರು ನಮ್ಮ ಶೌರ್ಯ ಸ್ವಯಂ ಸೇವಕರು ಎಂದು ಪ್ರಶಂಸಿದರು.
ವೇದಿಕೆಯಲ್ಲಿ ಮಾಸ್ಟರ್, ಕ್ಯಾಪ್ಟನ್ ಗಳಿಗೆ ಶೌರ್ಯ ಸಮವಸ್ತ್ರ ಹಾಗೂ ಕ್ಯಾಪ್ ಗಳನ್ನು ವಿತರಣೆ ಮಾಡಿದರು.
ವೇದಿಕೆಯಲ್ಲಿ ಉಷಾ ಫೈರ್ ಸೇಫ್ಟಿ ಕಂಪನಿಯ ತರಬೇತುದಾರರಾದ ಸಂತೋಷ್ ಪೀಟರ್ ಡಿ ಸೋಜಾ, ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಸುರೇಂದ್ರ ರವರು ಉಪಸ್ಥಿತರಿದ್ದರು.
ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ ಸ್ವಾಗತಿಸಿ, ಕಿಶೋರ್ ಕುಮಾರ್ ವಂದಿಸಿದರ. ಮೇಲ್ವಿಚಾರಕರು ನಿತೇಶ್ ಕೆ ರಾಜ್ಯದ 91 ತಾಲೂಕಿನ ಮಾಸ್ಟರ್ ಮತ್ತು ಕ್ಯಾಪ್ಟನ್ ಗಳು ಉಪಸ್ಥಿತರಿದ್ದರು.
ಜನಜಾಗೃತಿ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ಆಚಾರ್ಯ ನಿರೂಪಿಸಿದರು.