ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ 26ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.22ರಂದು ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.
ಶ್ರೀ ಜೈನಮಠ, ಮೂಡಬಿದ್ರೆಯ ಡಾ|| ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಭಜನಾ ಕಮ್ಮಟವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು ಕಾರ್ಯಕ್ರಮದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಮಹಾ ಲಕ್ಷ್ಮೀ ಸೇವಾ ಪ್ರತಿಷ್ಠಾನ, ಶ್ರೀಧಾಮ, ಮಾಣಿಲ ದಿವ್ಯ ಸಾನಿಧ್ಯ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾತೃಶ್ರೀ ಡಾ|| ಹೇಮಾವತಿ ವೀ. ಹೆಗ್ಗಡೆಯವರು ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಡಿ. ಹರ್ಷೇಂದ್ರ ಕುಮಾರ್ ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಸುಪ್ರೀಯ ಹರ್ಷೆಂದ್ರ ಕುಮಾರ್ ಉಪಸ್ಥಿತರಿದ್ದು, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾದೇಶಿಕ ಭಜನಾ ಪರಿಷತ್ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ , ಉಪಾಧ್ಯಕ್ಷ ರಾಜೇಂದ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಭಜನಾ ಕಮ್ಮಟದ ಕಾರ್ಯದರ್ಶಿ ಎಂ.ವಿ.ಶೆಟ್ಟಿ, ವರದಿ ವಾಚಿಸಿದರು.
ಕು.ಸುಪ್ರೀತಾ ಮತ್ತು ಮಾ. ವರ್ಚಸ್ ಪ್ರಾರ್ಥಿಸಿ, ವಿದುಷಿ ಶ್ರೀಮತಿ ಚೈತ್ರ ತಂಡದವರು ನೃತ್ಯರೂಪಕದ ಮೂಲಕ ಪ್ರಾರ್ಥನೆಯನ್ನು ನೇರವೇರಿಸಿದರು.
ಡಾ.ಐ.ಶಶಿಕಾಂತ್ ಜೈನ್ ಸ್ವಸ್ತಿಮಂತ್ರ ಪಠಿಸಿದರು. ಭಜನಾ ಪರಿಷತ್ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿ, ಶ್ರೀನಿವಾಸ್ ರಾವ್ ವಂದಿಸಿದರು. ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.