ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ..!: ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೆಲವಷ್ಟು ದಿನ ವಿರಾಮ ಪಡೆದಿದ್ದ ಮಳೆ ಮತ್ತೆ ಸುರಿಯಲಾರಂಭಿಸಿದೆ. ದ.ಕ ಜಿಲ್ಲೆಯ ಅಲ್ಲಲ್ಲಿ ಮಳೆಯಾಗುತ್ತಿದ್ದು ಹೆಚ್ಚಾಗಿ ಮೋಡಕವಿದ ವಾತಾವರಣವಿದೆ. ಆದರೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಉಳಿದೆಡೆ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ.

error: Content is protected !!