ಸಾಂದರ್ಭಿಕ ಚಿತ್ರ
ಪುತ್ತೂರು: ಆಂಬ್ಯುಲೆನ್ಸ್ ಗೆ ಪಿಕಪ್ ಡಿಕ್ಕಿಯಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಪುಟ್ಟ ಕಂದಮ್ಮ ಗಾಯಗೊಂಡ ಘಟನೆ ಸೆ.23ರಂದು ಮುರ ಎಂಬಲ್ಲಿ ತಡರಾತ್ರಿ ನಡೆದಿದೆ.
ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿದ್ದು, ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.