ಚಿಕ್ಕಮಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಮಲೆನಾಡು ಭಾಗದಲ್ಲಿ ಕಳೆದೆರಡು ದಿನಗಳಿಂದ ಸಂಜೆ, ರಾತ್ರಿ ವೇಳೆ ಮಳೆಯ ಪ್ರಮಾಣ ಹೆಚ್ಚಾಗಿದೆ.
ಮಳೆಯಿಂದ ನದಿಗಳಲ್ಲಿ ನೀರಿ ಮಟ್ಟ ಹೆಚ್ಚಾಗಿದ್ದು ಕೆಲವು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಳಸ ತಾಲೂಕು ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ರಸ್ತೆ ಸಂಪರ್ಕ ಇಲ್ಲದೇ ಅನಾರೋಗ್ಯ ಪೀಡಿತ ವೃದ್ಧೆಯೊಬ್ಬರನ್ನು ಕುಟುಂಬಸ್ಥರು 3 ಕಿ.ಮೀ. ದೂರು ಹೊತ್ತುಕೊಂಡೇ ಆಸ್ಪತ್ರೆಗೆ ಸೇರಿಸಿದ ಘಟನೆ ಸೆ.25ರ ಸಂಜೆ ವರದಿಯಾಗಿದೆ.
ಕುದುರೆಮುಖ, ಸಂಸೆ, ನಲ್ಲಿಬೀಡು ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿದಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ತುಂಗಾ, ಭದ್ರಾ, ನದಿಗಳಲ್ಲಿ ನೀರಿನ ಹರಿವು ಮತ್ತೆ ಹೆಚ್ಚಾಗಿದೆ. ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಎಂದು ತಿಳಿದು ಬಂದಿದೆ.