ಮಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ ನೀಡಿದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.
ಅಕ್ಟೋಬರ್ 21ರಂದು ಉಪಚುನಾವಣೆ ನಿಗದಿಯಾಗಿದ್ದು ಈ ಬೆನ್ನಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಪೈಪೋಟಿ ಜೋರಾಗಿದೆ. ಬಿಜೆಪಿಯಲ್ಲಿ 15 ಆಕಾಂಕ್ಷಿಗಳಿದ್ದು, ಕಾಂಗ್ರೆಸ್‌ನಲ್ಲಿ ಸಂಖ್ಯಾಬಲ 5 ಇದ್ದರೂ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಉತ್ಸಾಹದಲ್ಲಿದೆ. ಸದ್ಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್‌ಗೆ ಕಳುಹಿಸಿ ಕೊಡಲಾಗಿದ್ದು, ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ಮೂಡಿದೆ.
ಬಿಜೆಪಿಯಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಪ್ರಮೋದ್ ಮಧ್ವರಾಜ್, ಉದಯಕುಮಾರ್ ಶೆಟ್ಟಿ, ಸತೀಶ್ ಕುಂಪಲ ಸೇರಿದಂತೆ 15 ಮಂದಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ.
ಕಾಂಗ್ರೆಸ್‌ನಿAದ ಉಡುಪಿ ಜಿಲ್ಲೆಯವರೇ ಆಕಾಂಕ್ಷಿಗಳಾಗಿದ್ದು, ಮಾಜಿ ಜಿ.ಪಂ. ಅಧ್ಯಕ್ಷ ರಾಜು ಪೂಜಾರಿ, ರಾಜು ಕಾರ್ಕಳ, ಭುಜಂಗ ಶೆಟ್ಟಿ ಸೇರಿದಂತೆ ಐವರು ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಸೆ.26 ರಿಂದ ಅ.3ರವರೆಗೆ ಅವಕಾಶವಿದ್ದು ಅ.4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅ.7ರಂದು ನಾಮಪತ್ರ ವಾಪಸ್‌ಗೆ ಕೊನೆ ದಿನ. ಅ.21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ಹಾಗೂ ಅ.24ರಂದು ಮತ ಎಣಿಕೆ ನಡೆಯಲಿದೆ.