ಸಾಂದರ್ಭಿಕ ಚಿತ್ರ
ಬೆಳಗಾವಿ: ಮೂರು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿದ ಅಪರಾಧಿಗೆ ಬೆಳಗಾವಿಯ ಪೋಕ್ಸೋ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಗಲ್ಲು ಶಿಕ್ಷೆ ಹಾಗೂ 45 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.
ಘಟನೆ ಹಿನ್ನೆಲೆ
ಮನೆಯ ಮುಂದೆ ಆಟವಾಡುತ್ತಿದ್ದ 3 ವರ್ಷದ ಅಪ್ರಾಪ್ತ ಬಾಲಕಿಯನ್ನು ಚಾಕೊಲೇಟ್ ಕೊಡಿಸಿ ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ (32) ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಮಗುವನ್ನು ಹತ್ಯೆ ಮಾಡಿದ್ದ.
ಈ ಪ್ರಕರಣ ಸಂಬAಧ ಕೂಲಂಕುಷವಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ.