ಉದ್ಯೋಗ ಖಾತರಿ ಯೋಜನೆ: ಗ್ರಾಮ ಪಂಚಾಯತ್ ಗೆ ಅರ್ಜಿಸಲ್ಲಿಸಲು ಸೂಚನೆ

ಬೆಳ್ತಂಗಡಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಗೆ ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿ ಕೈಗೊಳ್ಳುವವರು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ತಿಳಿಸಿದ್ದಾರೆ.

“ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ” ಅಭಿಯಾನದಡಿ ವೈಯಕ್ತಿಕ ಕಾಮಗಾರಿಗಳಾದ ತೆರೆದ ಬಾವಿ, ದನದ ಹಟ್ಟಿ, ಮೇಕೆ/ಕುರಿ ಶೆಡ್, ಹಂದಿ ಶೆಡ್, ಕೋಳಿ ಶೆಡ್, ಕೊಳವೆ ಬಾವಿ ಮರುಪೂರಣ ಘಟಕ, ದ್ರವ ತ್ಯಾಜ್ಯ ಗುಂಡಿ, ಎರೆಹುಳು ಗೊಬ್ಬರ ಘಟಕ, ಬಯೋಗ್ಯಾಸ್, ಕೃಷಿ ಹೊಂಡ ರಚನೆ, ಗೊಬ್ಬರ ಗುಂಡಿ, ಇಂಗು ಗುಂಡಿ , ಅಡಿಕೆ ಕೃಷಿ, ತೆಂಗು ಕೃಷಿ, ಚಿಕ್ಕು, ಕಾಳುಮೆಣಸು, ಕ್ಕೊಕ್ಕೋ, ವೀಳ್ಯದೆಲೆ, ಮಾವು, ಗುಲಾಬಿ, ತಾಳೆ, ಗೇರು, ಮಲ್ಲಿಗೆ ಅಂಗಾAಶ ಬಾಳೆ, ಪಪ್ಪಾಯ, ನುಗ್ಗೆ ಕೃಷಿ, ರಂಬೂಟನ್, ಪೇರಳೆ, ಪೌಷ್ಟಿಕ ತೋಟ ರಚನೆ, ಬಸಿಗಾಲುª ೆ(ಉಜಿರ್ ಕಣಿ) ರಚನೆ, ಡ್ರ‍್ಯಾಗನ್ ಫ್ರೂಟ್, ಸಾರ್ವಜನಿಕ ಕಾಮಗಾರಿಗಳಾದ ಸಾರ್ವಜನಿಕ ತೋಡಿನ ಹೂಳೆತ್ತುವಿಕೆ, ಇಂಗುಗುAಡಿ ನಿರ್ಮಾಣ ಇತ್ಯಾದಿ ವಿವಿಧ ಕಾಮಗಾರಿಗಳಿಗೆ ಅರ್ಜಿ ಸಲ್ಲಿಸಬಹುದು.

ಬೇಕಾಗುವ ದಾಖಲೆಗಳು:
1. ಬಿಪಿಎಲ್ ಕಾರ್ಡ್ ಪ್ರತಿ
2. ಎಪಿಎಲ್ ಆಗಿದ್ದಲ್ಲಿ ಸಣ್ಣ ರೈತ ಪ್ರಮಾಣ ಪತ್ರ
3. ಪ.ಜಾತಿ/ಪಂಗಡದ ಜಾತಿ ಪ್ರಮಾಣ ಪತ್ರ
4. ಆರ್‌ಟಿಸಿ ಪ್ರತಿ
5. ಹಕ್ಕುಪತ್ರ ಇದ್ದಲ್ಲಿ ಅದರ ಯಥಾ ಪ್ರತಿ

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಬೇಕಾಗಿ ತಿಳಿಸಿದ್ದಾರೆ.

error: Content is protected !!