ಉಡುಪಿ ಜಿಲ್ಲೆಯ ಪ್ರವಾಸಿ ತಂಡಕ್ಕೆ ಮತ್ಸ್ಯಗಂಧ ರೈಲು ಮಿಸ್:ಸಂಕಷ್ಟದಲ್ಲಿ ಸಿಲುಕಿದ್ದ ತಂಡಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೆರವು: ಸಿಎಸ್‌ಟಿ- ಮಂಗಳೂರು ರೈಲಿಗೆ ವಿಶೇಷ ಬೋಗಿ ವ್ಯವಸ್ಥೆ

ಕುಂದಾಪುರ: ಉತ್ತರ ಭಾರತ ಪ್ರವಾಸ ಮುಗಿಸಿ ಮುಂಬಯಿಗೆ ಬಂದು ಮತ್ಸ್ಯಗಂಧ ರೈಲಿನಲ್ಲಿ ಊರಿಗೆ ಬರಬೇಕಿದ್ದ ಉಡುಪಿ ಜಿಲ್ಲೆಯ ತಂಡ ಸಕಾಲಕ್ಕೆ ರೈಲ್ವೇ ಸ್ಟೇಷನ್ ತಲುಪದ ಕಾರಣ ಸಂಕಷ್ಟಕ್ಕೆ ಸಿಲುಕಿದ್ದು ಇವರಿಗೆ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರ್ಯಾಯ ವ್ಯವಸ್ಥೆ ಮೂಲಕ ನೆರವಾಗಿದ್ದಾರೆ.

ಉಡುಪಿ ಜಿಲ್ಲೆಯ ಸುಮಾರು 80 ಮಂದಿ ಹಿರಿಯ ನಾಗರಿಕರಿದ್ದ ತಂಡವು ರಾಂಚಿ – ಮುಂಬಯಿ ಎಕ್ಸ್ಪ್ರೆಸ್ ರೈಲು 10 ಗಂಟೆ  ವಿಳಂಬದಿಂದಾಗಿ ಮಾರ್ಗ ಮಧ್ಯೆ ಸಿಲುಕಿದ್ದರು. ಈ ತಂಡ ಮುಂಬಯಿ ತಲುಪುವ ಮೊದಲೇ ಊರಿಗೆ ಬರಬೇಕಿದ್ದ ಮತ್ಸ್ಯಗಂಧ ರೈಲು ಹೊರಟಾಗಿತ್ತು. ಹೀಗಾಗಿ ಸಂಕಷ್ಟಕ್ಕೆ ಸಿಲುಕಿದ್ದ ಇವರು ಸಂಸದರನ್ನು ಸಂಪರ್ಕಿಸಿತು. ಕೂಡಲೇ ಸಂಸದರು ರೈಲ್ವೇ ಸಚಿವಾಲಯದ ಜತೆ ಮಾತನಾಡಿ, ಮಂಗಳೂರಿಗೆ ಬರಬೇಕಾದ ಸಿಎಸ್‌ಟಿ- ಮಂಗಳೂರು ರೈಲಿಗೆ ವಿಶೇಷ ಬೋಗಿಯ ವ್ಯವಸ್ಥೆ ಮಾಡಿ, ಆ ಮೂಲಕ ಸಮಸ್ಯೆಗೆ ಸಿಲುಕಿದ್ದ ತಂಡವು ಊರಿಗೆ ಪ್ರಯಾಣ ಬೆಳೆಸಿದರು.

ಇದಕ್ಕೆ ಸಹಕರಿಸಿದ ರೈಲ್ವೇ ಖಾತೆ ರಾಜ್ಯ ಸಚಿವ ಸೋಮಣ್ಣ ಹಾಗೂ ಅವರ ಕಚೇರಿಯ ಸಿಬಂದಿಗೆ ಸಂಸದರು ಕೃತಜ್ಞತೆ ಸಲ್ಲಿಸಿದ್ದಾರೆ.

error: Content is protected !!