ಚಿತ್ರದುರ್ಗ: ಹೃದಯಾಘಾತದಿಂದ ದಂಪತಿಗಳು ಒಂದೇ ದಿನ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ.
ಕೆಳಗೋಟೆ ಬಡಾವಣೆಯಲ್ಲಿ ವಾಸವಾಗಿದ್ದ ಓಂಕಾರಮೂರ್ತಿ(66) ಅವರಿಗೆ ಸೋಮವಾರ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ನಗರದ ಬಸವೇಶ್ವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸುದ್ದಿಯನ್ನು ಮನೆಯಲ್ಲಿದ್ದ ಅವರ ಪತ್ನಿ ದ್ರಾಕ್ಷಾಯಣಿ ಅವರಿಗೆ ರವಾನಿಸಲಾಗಿತ್ತು. ಆದರೆ ಪತಿಗೆ ಹೃದಯಾಘಾತವಾದ ಸುದ್ದಿ ತಿಳಿದು ಪತ್ನಿ ಆಘಾತಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಪತಿ, ಪತ್ನಿ ಇಬ್ಬರೂ ಮೃತಪಟ್ಟಿದ್ದಾರೆ.