ಉತ್ತರಪ್ರದೇಶ: ಕಾರ್ಮಿಕರನ್ನು ತುಂಬಿದ್ದ ಟ್ರ‍್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಡಿಕ್ಕಿ ಹೊಡೆದ ಘಟನೆ ವಾರಾಣಸಿ – ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯ ಕಚ್ವಾನ್ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಭದೋಹಿ ಜಿಲ್ಲೆಯಿಂದ ಮೇಲ್ಛಾವಣಿಯನ್ನು ಎರಕಹೊಯ್ದ ನಂತರ ಎಲ್ಲ ಕಾರ್ಮಿಕರು ಟ್ರ‍್ಯಾಕ್ಟರ್ ಟ್ರಾಲಿಯಲ್ಲಿ ತಮ್ಮ ಮನೆಗಳಿಗೆ ಮರಳುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್, ಟ್ರ‍್ಯಾಕ್ಟರ್ ಟ್ರಾಲಿಗೆ ಹಿಂದಿನಿAದ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ‍್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದ್ದು 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳಾಗಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ.