ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಇಂದು(ಅ.04) ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ.
ಮಿಯಾರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಸುಮಾರು 10 ಗಂಟೆಗೆ ಮರದ ರೆಂಬೆ ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ಅಲ್ಲಿದ್ದವರು ತಕ್ಷಣ ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.
ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.