ಚಿಕ್ಕಮಗಳೂರು: ಅರಣ್ಯ ವಲಯ ವ್ಯಾಪ್ತಿಯಲ್ಲಿನ 30 ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ತೆರವಿಗೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.
ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿನ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್‌ಸ್ವಾಮಿ ದರ್ಗಾ, ಚಂದ್ರದ್ರೋಣ ಪರ್ವತದ ಸುತ್ತಮುತ್ತ ನಿರ್ಮಾಣವಾಗಿರುವ ಹೋಂಸ್ಟೇ, ರೆಸಾರ್ಟ್ ಮಾಲಿಕರು ತಮ್ಮ ಹೋಂಸ್ಟೇಗೆ ಸಂಬAಧಿಸಿದ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸುವಂತೆ ಡಿಎಫ್‌ಒ ರಮೇಶ್ ಬಾಬು ಅವರು ನೋಟಿಸ್ ನೀಡಿದ್ದರು. ದಾಖಲೆ ಪರಿಶೀಲನೆ ವೇಳೆ ಅನಧಿಕೃತವಾಗಿ ಹೋಂಸ್ಟೇ, ರೆಸಾರ್ಟ್ಗಳನ್ನು ನಿರ್ಮಾಣ ಮಾಡಿರುವುದು ಬೆಳಕಿಗೆ ಬಂದಿದೆ. ಈ ಎಲ್ಲ ಅನಧಿಕೃತ ರೆಸಾರ್ಟ್, ಹೋಂಸ್ಟೇಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ತಯಾರಿ ನಡೆಸಿದೆ.
ವಯನಾಡಿನ ದುರ್ಘಟನೆ ಬಳಿಕ ಹಾಗೂ ಅಂಕೋಲಾದ ಶಿರೂರು, ಶಿರಾಡಿ ಘಾಟ ಭೂಕುಸಿತದಿಂದ ಎಚ್ಚೆತ್ತ ರಾಜ್ಯ ಸರ್ಕಾರ ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಹೋಂಸ್ಟೇ, ರೆಸಾರ್ಟ್ ತೆರವಿಗೆ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದು, ಅನಧಿಕೃತ ಹೋಂ ಸ್ಟೇಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2015 ನಂತರ ಆಗಿರುವ ಹೋಂ ಸ್ಟೇ, ರೆಸಾರ್ಟ್ಗಳನ್ನು ತೆರವು ಮಾಡಲಾಗುತ್ತದೆ. ಅಧಿಕೃತವಾಗಿ ಅವರ ಜಮೀನಿನಲ್ಲೇ ಕಟ್ಟಿದ್ದರೆ ಯಾವುದೇ ಕ್ರಮ ಇಲ್ಲ. ಮೂರು ಎಕರೆ ಒಳಗೆ ಇರುವವರನ್ನು ತೆರೆವುಗೊಳಿಸದಂತೆ ನಿಯಮ ಇದೆ. ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ನಿರ್ಮಾಣದಲ್ಲಿ ಅಧಿಕಾರಿಗಳು ಶಾಮಿಲಾಗಿದ್ದರೂ ಕೂಡ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.