ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈ ಬೆನ್ನಲೆ ಗುಡುಗು, ಮಿಂಚು ಸಹಿತ ಹಿಂಗಾರಿನ ಆರ್ಭಟ ಜೋರಾಗಿದೆ.
ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ 24 ಗಂಟೆ ಆರೆಂಜ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಹಾಗು ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.