ಗುರುವಾಯನಕೆರೆ: ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು, ಬಂಟರ ಸಂಘ ಬೆಂಗಳೂರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ, ಇವರ ಸಹಭಾಗಿತ್ವದಲ್ಲಿ ಅ.13ರಂದು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ.
ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆಯವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಅಜಿತ್‌ಕುಮಾರ್ ರೈ ಮಾಲಾಡಿ ಅಧ್ಯಕ್ಷರು, ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾನ್ಯ ಸಂಸದರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ, ಹರೀಶ್ ಪೂಂಜ ಮಾನ್ಯ ಶಾಸಕರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ಶಶಿಧರ ಶೆಟ್ಟಿ ನವಶಕ್ತಿ ಉದ್ಯಮಿಗಳು ಬರೋಡಾ, ಐಕಳ ಹರೀಶ್ ಶೆಟ್ಟಿ ಅಧ್ಯಕ್ಷರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ಮಂಗಳೂರು, ಸಿ.ಎ ಅಶೋಕ್ ಶೆಟ್ಟಿ ಎಂ. ಅಧ್ಯಕ್ಷರು, ಬಂಟರ ಸಂಘ ಬೆಂಗಳೂರು, ವಿವೇಕ್ ಆಳ್ವಟ್ರಸ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.