ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿಯರು: 7 ಮಂದಿಯನ್ನು ಬಂಧಿಸಿದ ಪೊಲೀಸರು: ಆರೋಪಿಗಳಿಂದ ನಕಲಿ ಆಧಾರ್ ಕಾರ್ಡ್ ಸೃಷ್ಟಿ

ಉಡುಪಿ : ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿಯರನ್ನು ಪೊಲೀಸರು ಪಡೆದಿದ್ದಾರೆ.

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಮಹಮ್ಮದ್ ಮಾಣಿಕ್ ಎಂಬಾತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದು, ಈ ವೇಳೆ, ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳು ಪರಿಶೀಲನೆಯಲ್ಲಿದ್ದು, ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ.

ಈತನ ವಿಚಾರಣೆ ವೇಳೆ ಮತ್ತೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದ್ದು , ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಎಂಬುವವರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದ. ಉಸ್ಮಾನ್ ಎಂಬಾತ ಇವರನ್ನು ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ತನಿಖೆ ವೇಳೆ ನಕಲಿಯಾಗಿ ಸೃಷ್ಟಿಸಿದ್ದ ಭಾರತೀಯ ದಾಖಲಾತಿ ಪತೆಯಾಗಿದ್ದು, ಮಲ್ಪೆ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಪ್ರತಿಕ್ರಿಯಿಸಿದ್ದು, “ಮಲ್ಪೆ ಠಾಣಾವ್ಯಾಪ್ತಿಯ ಹೂಡೆಯಲ್ಲಿ ಏಳು ಮಂದಿ ಬಾಂಗ್ಲಾದೇಶೀಯರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಮಾಹಿತಿ ಬಂತು. ಅಕ್ರಮ ನೆಲೆಸಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಮಹಮ್ಮದ್ ಮಾಣಿಕ್ ಎಂಬವನು ಇವರ ಜತೆ ವಾಸವಿದ್ದ. ಆತ ನಕಲಿ ಪಾಸ್ ಪೋರ್ಟ್ ಬಳಸಿ, ಮಂಗಳೂರು ವಿಮಾನ ನಿಲ್ದಾಣ ಮೂಲಕ ದುಬೈಗೆ ತೆರಳಲು ಮುಂದಾಗಿದ್ದ. ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಈ ಕಡೆ ವಾಸವಿದ್ದು, ನಕಲಿ ಆಧಾರ್ ಕಾರ್ಡ್ ಹೇಗೆ ಬಂತು, ಬಾರ್ಡರ್ ಹೇಗೆ ಕ್ರಾಸ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು, ನ್ಯಾಯಾಲಯಕ್ಕೆ ಶೀಘ್ರ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!