ಸಾಂದರ್ಭಿಕ ಚಿತ್ರ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದು ಆದರೆ ಅರಬ್ಬಿ ಸಮುದ್ರದಲ್ಲಿ ಚುರುಕು ಪಡೆದಿದೆ. ಈ ಹಿನ್ನಲೆ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಮುಖ್ಯವಾಗಿ ಅಕ್ಟೋಬರ್ 21ರಿಂದ 22ರವರೆಗೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಉಡುಪಿ, ಉತ್ತರ ಕನ್ನಡ ಮತ್ತು ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಅಕ್ಟೋಬರ್ 20ರಂದು ಒಂದೇ ದಿನ ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.