ಅಸ್ಪೃಶ್ಯತೆ ಪ್ರಕರಣ: 101 ಮಂದಿ ವಿರುದ್ಧದ ಆರೋಪ ಸಾಬೀತು..!:9 ವರ್ಷದ ಬಳಿಕ ಅ.24ರಂದು ಶಿಕ್ಷೆ ಪ್ರಕಟ..!:ಏನಿದು ಘಟನೆ..?

ಗಂಗಾವತಿ: ಮುರುಕುಂಬಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ಮತ್ತು ನಂತರ ದಲಿತರ ಓಣಿಗೆ ನುಗ್ಗಿ ದಲಿತ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಮಂದಿ ವಿರುದ್ಧದ ಆರೋಪ ಸಾಬೀತಾಗಿದ್ದು ಅ.24ರಂದು ಶಿಕ್ಷೆ ಪ್ರಕಟವಾಗಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಪೂರ್ಣಗೊಳಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿರುವುದಾಗಿ ಸೋಮವಾರ ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದ್ದಾರೆ.

2015ರಲ್ಲಿ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ. ಕ್ಷೌರದಂಗಡಿಗೆ ಮತ್ತು ಹೋಟೆಲ್ ಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ ವಿಚಾರವಾಗಿ ಜಗಳ ನಡೆದು ಬಳಿಕ ಪೊಲೀಸ್ ಅಧಿಕಾರಿಗಳು ಮುರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೇ ಕೋಪದಿಂದ “ಸರ್ವಣೀಯರು” ಎಂದು ಕರೆಸಿಕೊಳ್ಳುವ ಜನ ರಾತ್ರಿ ಸಮಯದಲ್ಲಿ ದಲಿತರ ಕೇರಿಗೆ ನುಗ್ಗಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಲ್ಲದೆ, ದಲಿತರ ಮೇಲೆ ಹಲ್ಲೆ ನಡೆಸಿದ್ದರು.ಈ ಘಟನೆಗೆ ಸಂಬಂಧಿಸಿ ಗ್ರಾಮದ 117 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಘಟನೆ ನಡೆದು 9 ವರ್ಷವಾಗಿದ್ದರಿಂದ ಈ ನಡುವೆ ಕೆಲ ಆರೋಪಿಗಳು ಸಾವನ್ನಪ್ಪಿದ್ದಾರೆ. ಉಳಿದವರ ಪೈಕಿ 101 ಮಂದಿಯ ವಿರುದ್ಧ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದ 100 ಮಂದಿಯನ್ನು ಅ.21ರಂದು ಪೊಲೀಸರು ಬಂಧಿಸಿದ್ದಾರೆ.ಇನ್ನೋರ್ವ ಆರೋಪಿ ವಿಚಾರಣೆಗೆ ಹಾಜರಾಗಿರದ ಕಾರಣ ಆತನ ಬಂಧನ ಆಗಿಲ್ಲ. ಹೀಗಾಗಿ ಆತನನನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.ಮುರುಕುಂಬಿ ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ಮತ್ತು ನಂತರ ದಲಿತರ ಓಣಿಗೆ ನುಗ್ಗಿ ದಲಿತ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಮಂದಿ ವಿರುದ್ಧದ ಆರೋಪ ಸಾಬೀತಾಗಿದ್ದು ಅ.24ರಂದು ಶಿಕ್ಷೆ ಪ್ರಕಟವಾಗಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಪೂರ್ಣಗೊಳಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿರುವುದಾಗಿ ಸೋಮವಾರ ತೀರ್ಪು ಪ್ರಕಟಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದ್ದಾರೆ.

2015ರಲ್ಲಿ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ. ಕ್ಷೌರದಂಗಡಿಗೆ ಮತ್ತು ಹೋಟೆಲ್ ಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ ವಿಚಾರವಾಗಿ ಜಗಳ ನಡೆದು ಬಳಿಕ ಪೊಲೀಸ್ ಅಧಿಕಾರಿಗಳು ಮುರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೇ ಕೋಪದಿಂದ “ಸರ್ವಣೀಯರು” ಎಂದು ಕರೆಸಿಕೊಳ್ಳುವ ಜನ ರಾತ್ರಿ ಸಮಯದಲ್ಲಿ ದಲಿತರ ಕೇರಿಗೆ ನುಗ್ಗಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಲ್ಲದೆ, ದಲಿತರ ಮೇಲೆ ಹಲ್ಲೆ ನಡೆಸಿದ್ದರು.

ಈ ಘಟನೆಗೆ ಸಂಬಂಧಿಸಿ ಗ್ರಾಮದ 117 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಘಟನೆ ನಡೆದು 9 ವರ್ಷವಾಗಿದ್ದರಿಂದ ಈ ನಡುವೆ ಕೆಲ ಆರೋಪಿಗಳು ಸಾವನ್ನಪ್ಪಿದ್ದಾರೆ. ಉಳಿದವರ ಪೈಕಿ 101 ಮಂದಿಯ ವಿರುದ್ಧ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದ 100 ಮಂದಿಯನ್ನು ಅ.21ರಂದು ಪೊಲೀಸರು ಬಂಧಿಸಿದ್ದಾರೆ.

ಇನ್ನೋರ್ವ ಆರೋಪಿ ವಿಚಾರಣೆಗೆ ಹಾಜರಾಗಿರದ ಕಾರಣ ಆತನ ಬಂಧನ ಆಗಿಲ್ಲ. ಹೀಗಾಗಿ ಆತನನನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

error: Content is protected !!