ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರೌದ್ರಾವತಾರ ತಾಳಿದ ‘ಡಾನಾ’ ಚಂಡಮಾರುತ: ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ

ಮಳೆಗಾಲದ ಹಿಂಗಾರಿನ ಸಮಯದಲ್ಲೇ ವಾಯುಭಾರ ಕುಸಿತವುಂಟಾಗಿ ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಬೆನ್ನಲ್ಲೇ ಮತ್ತೆ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದಿಂದ ‘ಡಾನಾ’ ಚಂಡಮಾರುತ ರೌದ್ರಾವತಾರ ತಾಳಿದೆ.

‘ಡಾನಾ’ ಚಂಡಮಾರುತ ಪ್ರಭಾವದಿಂದ ಬಿರುಗಾಳಿ ಸಹಿತ ದೇಶದ ಈ ವಿವಿಧ ರಾಜ್ಯಗಳಿಗೆ ಭರ್ಜರಿ ಮಳೆ ಆಗಲಿದ್ದು ಅ. 25ರಂದು ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನಲೆ ಅಕ್ಟೋಬರ್ 24-25 ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ. ಗಂಟೆಗೆ 120 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಪರಿಣಾಮ ಓಡಿಶಾ, ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಮಳೆ ನಿರೀಕ್ಷಿಸಲಾಗಿದ್ದು, ತಮಿಳುನಾಡಿಗೆ ಹಗುರದಿಂದ ಸಾಧಾರಣ ಮಳೆ ಆಗಲಿದೆ.

error: Content is protected !!