ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಕಿಶೋರ್ ಕುಮಾರ್ ಬೊಟ್ಯಾಡಿ 1600ಕ್ಕೂ ಅಧಿಕ ಮತಗಳಿಂದ ಜಯಶಾಲಿಯಾಗಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅ.21 ರಂದು ಚುನಾವಣೆ ನಡೆದಿತ್ತು. ಅಭ್ಯರ್ಥಿಗಳಾಗಿ ಬಿಜೆಪಿಯಿಂದ ಕಿಶೋರ್ ಬಿ.ಆರ್, ಕಾಂಗ್ರೆಸ್ನಿಂದ ರಾಜು ಪೂಜಾರಿ, ಎಸ್ಡಿಪಿಐನಿಂದ ಅನ್ವರ್ ಸಾದತ್.ಎಸ್ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ಕಣದಲ್ಲಿದ್ದರು.
ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.
ಜಾಹೀರಾತು
ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿತ್ತು. ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಯಿತು.
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ಗೆ ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್ನ ರಾಜು ಪೂಜಾರಿ ಪರಾಭವಗೊಂಡಿದ್ದು ಬಿಜೆಪಿ ಮತ್ತಷ್ಟ ತನ್ನ ಬಲ ಹೆಚ್ಚಿಸಿಕೊಂಡಿದೆ.
ಯಾರಿಗೆ ಎಷ್ಟು ಮತ..?
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್: 3655
ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ: 1958
ಎಸ್ಡಿಪಿಐ ಅಭ್ಯರ್ಥಿ: ಅನ್ವರ್ ಸಾದತ್.ಎಸ್: 195
ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ :9