ಬೆಳ್ತಂಗಡಿ : ವೈನ್ಸ್ ಶಾಪ್ ಮತ್ತು ಮೊಬೈಲ್ ಶಾಪ್ ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರ ಬಲೆಯಲ್ಲಿ ಅಂತರ್ ರಾಜ್ಯ ಕಳ್ಳರು ಸೆರೆಯಾಗಿದ್ದಾರೆ.
ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯ ಮದ್ಯದ ಅಂಗಡಿ ಬೀಗ ಒಡೆದು ನುಗ್ಗಿದ ಕಳ್ಳರು ಹಣ ಹಾಗೂ ಮದ್ಯದ ಬಾಟಲಿ ಗಳನ್ನು ಕಳ್ಳತನ ಮಾಡಿದ ಘಟನೆ ಅ.13 ರಂದು ಭಾನುವಾರ ರಾತ್ರಿ ನಡೆದಿತ್ತು. ಅಂಗಡಿಯ ಬೀಗ ಒಡೆದು ಶಟರ್ ತೆಗೆದು ಒಳಗೆ ನುಗ್ಗಿದ ಕಳ್ಳರು ಒಳಗೆ ಇರಿಸಲಾಗಿದ್ದ ಸುಮಾರು ಒಂಬತ್ತು ಸಾವಿರ ನಗದು ಎರಡು ಬಿಯಾರ್ ಬಾಟಲ್‌ನ್ನು ಕಳ್ಳತನ ಮಾಡಲಾಗಿತ್ತು. ಜೊತೆಗೆ ಅದೇ ದಿನ ರಾತ್ರಿ ಉಜಿರೆಯ ಮೊಬೈಲ್ ಶಾಪ್ ನಲ್ಲಿ ಕೂಡ ಕಳ್ಳತನವಾಗಿ 600 ರೂಪಾಯಿಗಳನ್ನು ಕಳ್ಳರು ಎಗರಿಸಿದ್ದರು. ಈ ಕಳ್ಳತನ ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಪ್ರಕರಣದ ಜಾಡು ಹಿಡಿದ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ನೇತೃತ್ವದ ತಂಡ ಸಿಸಿಕ್ಯಾಮರಗಳ ಮೂಲಕ ಕಳ್ಳತನಕ್ಕೆ ಬಳಸಿದ ಬೈಕ್ ಪತ್ತೆ ಹಚ್ಚಿದ್ದು, ಈ ವೇಳೆ ಆರೋಪಿಗಳು ಕೊಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿರುವುದು ಪತ್ತೆಯಾಗಿತ್ತು.
ಇದನ್ನು ಬೆನ್ನತ್ತಿದಾಗ ಪೊಲೀಸರಿಗೆ ಅಪ್ರಾಪ್ತ ಬಾಲಕ ಹಾಗೂ ಮತ್ತೊಬ್ಬನ ಸುಳಿವು ಸಿಕ್ಕಿತ್ತು. ಈ ಇಬ್ಬರೂ ಆರೋಪಿಗಳು ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.16 ರಂದು ಮಧ್ಯರಾತ್ರಿ 2:45 ಕ್ಕೆ ಕೋಣಿ ಶಾಖೆಯ ಕರ್ನಾಟಕ ಬ್ಯಾಂಕ್ ಕಳ್ಳತನಕ್ಕೆ ಯತ್ನ ಮಾಡುತ್ತಿರುವಾಗ ಬ್ಯಾಂಕ್ ನ ಮಾನಿಟರಿಂಗ್ ಹೈದರಾಬಾದ್ ಸಂಸ್ಥೆ ನೋಡಿಕೊಳ್ಳುತ್ತಿದ್ದು ಅವರು ಲೈವ್ ಮೂಲಕ ಸಿಸಿಕ್ಯಾಮರದ ಮೂಲಕ ಕಳ್ಳತನ ಯತ್ನ ನೋಡುತ್ತಿದ್ದು ಈ ವೇಳೆ ಬ್ಯಾಂಕ್ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿ ಅಂತರ್ ರಾಜ್ಯ ಕಳ್ಳರಾದ ಆರೋಪಿಗಳಾದ ಕೊಪ್ಪಳ ಜಿಲ್ಲೆಯ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್(22) ಮತ್ತು ಅಪ್ರಾಪ್ತ ಬಾಲಕ ರೆಡ್ ಹ್ಯಾಂಡ್ ಆಗಿ ಸೆರೆಹಿಡಿದಿದ್ದಾರೆ.
ಅಪ್ರಾಪ್ತ ಬಾಲಕನನ್ನು ಬಾಲನ್ಯಾಯಾಲಕ್ಕೆ ಹಾಜರುಪಡಿಸಿ ಬಾಲ ಮಂದಿರಕ್ಕೆ ಸೇರಿಸಲಾಗಿದ್ದು ಮತ್ತೊಬ್ಬನ್ನು ಉಡುಪಿ ಜೈಲಿಗೆ ಕಳುಹಿಸಲಾಗಿದೆ.
ಈ ಆರೋಪಿತರು ಕುಂದಾಪುರ ಠಾಣೆ ಮಾತ್ರವಲ್ಲದೆ, ಬೆಳ್ತಂಗಡಿ ಠಾಣೆ, ಪಡುಬಿದ್ರಿ ಠಾಣೆ, ಬಳ್ಳಾರಿ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಬ್ಯಾಂಕ್ ಕಳ್ಳತನ, ಬೈಕ್ ಕಳ್ಳತನ, ಅಂಗಡಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಬೆಳ್ತಂಗಡಿ ಪೊಲೀಸರು ಪ್ರಕರಣದ ತನಿಖೆ ನಡೆಸಲು ಇಬ್ಬರು ಆರೋಪಿಗಳನ್ನು ಬಾಡಿ ವಾರೆಂಟ್ ಮೂಲಕ ವಶಕ್ಕೆ ಪಡೆಯಲು ನ್ಯಾಯಾಲಯಕ್ಕೆ ಅನುಮತಿಯನ್ನು ಕೊರಿದ್ದು ಎರಡು ದಿನದಲ್ಲಿ ಆರೋಪಿಗಳನ್ನು ಉಡುಪಿ ಜೈಲಿನಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಬೈಕ್ ವಶಪಡಿಸಿಕೊಳ್ಳಾಗಿದೆ.