ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಮಧ್ಯಂತರ ಜಾಮೀನು: ಆರು ವಾರಗಳ ಕಾಲ ಜಾಮೀನು ಮಂಜೂರು: ಹೈಕೋರ್ಟ್ ವಿಧಿಸಿದ ಷರತ್ತುಗಳೇನು..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನಿಗಾಗಿ ನಿರಂತರ ಪ್ರಯತ್ನ ಮಾಡಿದ್ದು, ಸದ್ಯ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ದರ್ಶನ್ ಪರ ವಕೀಲರು “ನಟ ದರ್ಶನ್‌ಗೆ ಆರೋಗ್ಯ ತೀವ್ರ ಹದಗೆಟ್ಟಿದೆ. ಇದೀಗ ಶಸ್ತ್ರ ಚಿಕಿತ್ಸೆ ನಡೆಯದಿದ್ದರೇ ಪಾರ್ಶ್ವವಾಯುವಿಗೆ ಗುರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮದ್ಯಂತರ ಜಾಮೀನು ನೀಡಬೇಕು ಎಂದು ಕೋರಿದ್ದರು”. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಈ ಆದೇಶ ನೀಡಿದ್ದಾರೆ.

ಹೈಕೋರ್ಟ್ ವಿಧಿಸಿದ ಷರತ್ತುಗಳು

ದರ್ಶನ್ ಇಚ್ಚಿಸಿದ ಆಸ್ಪತ್ರೆಯಲ್ಲಿ ದಾಖಲಾಗಬಹುದು.
ಮುಂದಿನ ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು.
ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು. ಸಾಕ್ಷ್ಯಗಳ ನಾಶಕ್ಕೆ ಮುಂದಾಗಬಾರದು.
ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು.
ನ್ಯಾಯಾಲಯ ಸೂಚನೆ ಇಲ್ಲದೇ ವ್ಯಾಪ್ತಿ ಬಿಟ್ಟು ಹೊರಕ್ಕೆ ಹೋಗಬಾರದು

error: Content is protected !!