ನ.09ರಿಂದ ಭಾರೀ ಮಳೆ ಸಾಧ್ಯತೆ..!: 5 ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಣೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕದಾದ್ಯಂತ ವರುಣನ ಆರ್ಭಟ ಮತ್ತೆ ಹೆಚ್ಚಾಗಿದೆ.  ಹಿಂಗಾರಿ  ಸಂದರ್ಭದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು ಪ್ರತೀ ದಿನ ಸಂಜೆ ಒಂದೇ ಸಮನೆ ಸುರಿಯುವ ವರುಷಧಾರೆಗೆ ಜನ ಕಂಗಾಲಾಗಿದ್ದಾರೆ.

ಸಿಡಿಲು, ಮಿಂಚು, ಗಾಳಿ ಸಹಿತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಮತ್ತೆ ಹವಾಮಾನ ಇಲಾಖೆ ಇನ್ನಷ್ಟು ಮಳೆಯ ಮುನ್ಸೂಚನೆ ನೀಡಿದೆ.
ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದ್ದು, ಆದರೆ ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

error: Content is protected !!