ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯ ಅಜೆಕುರಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ನ.6 ರಂದು ಮಂಗಳೂರು ಗಣಿ ಇಲಾಖೆ ತಂಡ ದಾಳಿ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಗಣಿ ಇಲಾಖೆಯ ಗಿರೀಶ್ ಮೋಹನ್ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿದ ವೇಳೆ ಸ್ಥಳದಲ್ಲಿ ಮರಳುಗಾರಿಕೆ ನಡೆಯುತ್ತಿರುವುದು ಕಂಡುಬಂದಿದ್ದು ಮರಳುಗಾರಿಕೆಗೆ ಬಳಸಲಾಗುತ್ತಿದ್ದ ನಾಲ್ಕು ಬೋಟುಗಳನ್ನು ವಶಕ್ಕೆ ಪಡೆದಿದ್ದು ಇವುಗಳ ಮೌಲ್ಯ 6 ಲಕ್ಷ ರೂ ಅಗಿದ್ದು.ಸ್ಥಳದಲ್ಲಿ ಸಂಗ್ರಹಿಸಿದ್ದ ಮರಳಿನ ಮೌಲ್ಯ 25,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಗಿರೀಶ್ ಮೋಹನ್ ,ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ , ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತಧಿಕಾರಿ ಪ್ರದೀಪ್ ಕುಮಾರ್ ,ಗ್ರಾಮ ಸಹಾಯಕ ಹರೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.