ಬೆಳ್ತಂಗಡಿ : ಬೈಕ್ ಕಳ್ಳತನ ಪ್ರಕರಣ: ಮಾರಾಟ ಮಾಡಲು ಯತ್ನಿಸಿದಾಗಲೇ ಆರೋಪಿ ಪೊಲೀಸ್ ವಶ

ಬೆಳ್ತಂಗಡಿ : ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನ ಮಾಡಿದ್ದ ಆರೋಪಿ ಬೆಳ್ತಂಗಡಿ ಪೊಲೀಸರ ವಶವಾಗಿದ್ದಾನೆ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಮುಕ್ರೆ ನಿವಾಸಿ ಅಣ್ಣು ಲಿಂಗಾಯಿತರವರ ಮಗ ಯಾದವ(32) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕಳ್ಳತನ ಮಾಡಿದ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ಕುವೆಟ್ಟು ಗ್ರಾಮದ ಗುರುವಾಯನಕೆರೆ ಶ್ರೇಷ್ಠ ಫಾರ್ನಿಚರ್ ಅಂಗಡಿ ಬಳಿ ಸೆ.20ರಂದು ನಿಲ್ಲಿಸಿದ್ದ ಬೈಕ್ ನ್ನು ಆರೋಪಿ ಕಳ್ಳತನ ನಡೆಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬೈಕ್ ಮಾಲೀಕ ದೂರು ನೀಡಿದ್ದರು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ನ.08 ರಂದು ಬೆಳ್ತಂಗಡಿಯ ಲಾಯಿಲ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಸರಿಯಾದ ಯಾವುದೇ ದಾಖಲೆ ಇಲ್ಲದಿರುವ ಬೈಕ್ ಸಿಕ್ಕಿದ್ದು, ಈ ವೇಳೆ ಗುರುವಾಯನಕೆರೆಯಲ್ಲಿ ಕಳ್ಳತನ ಮಾಡಿದ ಬೈಕ್ ಮಾರಾಟ ಮಾಡಲು ಬಂದಿರುವ ಬಗ್ಗೆ ಬೈಕ್ ಸವಾರ ಬಾಯಿಬಿಟ್ಟಿದ್ದಾನೆ. ತಕ್ಷಣ ಪೊಲೀಸರು ಆರೋಪಿ ಸಮೇತ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ್ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಮುರುಳೀಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ನೇತೃತ್ವದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

error: Content is protected !!