ಚಾರ್ಮಾಡಿ ಘಾಟ್ ದ್ವಿಪಥ ಕಾಮಗಾರಿಗೆ 343.74 ಕೋಟಿ ರೂ.: ಕೇಂದ್ರ ಸರಕಾರದಿಂದ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮಂಗಳೂರಿನಿAದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದ್ದು, ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ತಿಳಿಸಿದ್ದಾರೆ.

error: Content is protected !!