ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಹೊಸದಿಲ್ಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ನ.11) ವಜಾಗೊಳಿಸಿದೆ.

ಅಕ್ಟೋಬರ್ 21ರಂದು, ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಕುರಿತು ವಿಚಾರಣೆಯನ್ನು ನಡೆಸಿ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದವನ್ನು ಮಂಡಿಸಿದ್ದು, ದೂರಿನಲ್ಲಿ ಐಪಿಸಿ ಸೆಕ್ಷನ್ 376 ಅಥವಾ ಅತ್ಯಾಚಾರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದರು. ಆದರೆ ನ್ಯಾಯಮೂರ್ತಿ ತ್ರಿವೇದಿ ಅವರು ಹಲವಾರು ಇತರ ದೂರುಗಳಿವೆ ಎಂದು ಹೇಳಿದ್ದಾರೆ.

error: Content is protected !!