ಮಂಗಳೂರಿನಲ್ಲಿ ಕೇಂದ್ರ ವಿತ್ತ ಸಚಿವೆ ಸೀತಾರಾಮನ್, ಬರಮಾಡಿಕೊಂಡ ಸಂಸದ ಬ್ರಿಜೇಶ್ ಚೌಟಾ: ಧರ್ಮಸ್ಥಳದ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮನ, ನಾಳೆ ಸ್ವ- ಸಹಾಯ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮದಲ್ಲಿ ಭಾಗಿ

 

 

 

ಬೆಳ್ತಂಗಡಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳೂರಿಗೆ ಬಂದಿಳಿದ್ದಾರೆ. ಈ ವೇಳೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ಬರಮಾಡಿಕೊಂಡರು.‌

ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸ್ವ ಸಹಾಯ ಸಂಘಗಳ ಸದಸ್ಯರಿಗೆ ₹ 600 ಕೋಟಿ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿಕೊಳ್ಳಲಿದ್ದು ,ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಅಧ್ಯಕ್ಷ ಶಾಜಿ ಕೆ. ವಿ., ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

error: Content is protected !!