ಉಡುಪಿ: ಮನೆಯಲ್ಲಿ ಅಕ್ರಮವಾಗಿ ಮದ್ಯ ಶೇಖರಣೆ ಮಾಡಿರುವ ಬಗ್ಗೆ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯ ಅಧಿಕಾರಿಗಳ ವಶವಾಗಿದೆ.
ಕಾರ್ಕಳ ತಾಲೂಕು ಬೋಳ ಗ್ರಾಮದಲ್ಲಿ ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳಲ್ಲಿ ಗೋವಾದಿಂದ ಅಕ್ರಮವಾಗಿ ತರಿಸಿಕೊಂಡಿರುವ ಮದ್ಯವನ್ನು ಸಂಗ್ರಹಿಸಿಡಲಾಗಿತ್ತು. ಅಲ್ಲದೆ ಮನೆಯಿಂದಲೇ ಲಿಕ್ಕರ್ ವ್ಯವಹಾರ ನಡೆಸುತ್ತಿದ್ದ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನಲೆ ದಾಳಿ ಮಾಡಿದ ಉಡುಪಿ ಅಬಕಾರಿ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ 200 ಕ್ಕೂ ಅಧಿಕ ಬಾಕ್ಸ್ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.