
ಬೆಂಗಳೂರು : ಚಿರತೆ ದಾಳಿಗೆ ಮಹಿಳೆಯೋರ್ವರು ಬಲಿಯಾದ ಘಟನೆ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ಕರಿಯಮ್ಮ (55) ಎಂಬವರ ಮೇಲೆ ಚಿರತೆ ದಾಳಿ ನಡೆಸಿದೆ. ಬಳಿಕ ರುಂಡವಿಲ್ಲದ ಮೃತದೇಹ ಪತ್ತೆಯಾಗಿದೆ.

ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿತ್ತು. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.