ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದಾದ್ಯಂತ ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ನ16ರಂದು ಕಾರ್ಯಾಚರಣೆ ಕೈಗೊಂಡ ಬೆಂಗಳೂರು ಸಂಚಾರ ಪೊಲೀಸರು, ಕೇವಲ 5 ಗಂಟೆಗಳಲ್ಲಿ 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.
ಸಂಚಾರ ನಿಯಮಗಳ ಉಲ್ಲಂಘನೆ ಹಿನ್ನಲೆ ಶನಿವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಒಟ್ಟು 1,507 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು 7.62 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.