ಸಾಂದರ್ಭಿಕ ಚಿತ್ರ
ಗುಂಡ್ಯ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನ.23ರ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.
ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್‌ನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಅಡ್ಡಹೊಳೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಈ ವೇಳೆ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಹಿಂದಿನಿAದ ಬರುತ್ತಿದ್ದ ಕಾರು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆಯುವ ಮೂಲಕ ಸರಣಿ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಲಾಗಿದೆ.
ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.