ಬೆಳ್ತಂಗಡಿ: ರಾಜ್ಯದ 3 ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಈ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಸ ವ್ಯಕ್ತಪಡಿಸಿದ್ದಾರೆ.
“ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ. ಗ್ಯಾರಂಟಿ ಯೋಜನೆಯನ್ನು ನುಡಿದಂತೆ ಜನಸಾಮಾನ್ಯರಿಗೆ ಸರ್ಕಾರ ನೀಡಿದೆ. ಈ ಬದ್ಧತೆಗೆ ವಿಧಾನಸಭಾ ಉಪ ಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್’ಗೆ ಗೆಲುವಿನ ಗ್ಯಾರಂಟಿಯನ್ನು ಜನತೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ನ.23ರಂದು ಪ್ರಕಟಗೊಂಡಿದ್ದು, ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ತನ್ನ ತಂತ್ರಗಾರಿಕೆಯ ಚಾಣಾಕ್ಷತೆ ಮೆರೆದಿದೆ.