ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು: ಮದುವೆಗೆ ಹೊರಟಿದ್ದ ಮೂವರು ಸಾವು..!

ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಬರೇಲಿ ಸಮೀಪ ಸಂಭವಿಸಿದೆ.

ವಿವೇಕ್ ಹಾಗೂ ಅಮಿತ್ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಲು ಬಾಡಿಗೆ ಕಾರೊಂದನ್ನು ಗೊತ್ತುಪಡಿಸಿ ಗುರುಗ್ರಾಮದಿಂದ ಉತ್ತರಪ್ರದೇಶದ ಬರೇಲಿಗೆ ಹೊರಟಿದ್ದರು. ಈ ವೇಳೆ ಮಾರ್ಗ ಸರಿಯಾಗಿ ಗೊತ್ತಿರದ ಕಾರಣ ಚಾಲಕ ಗೂಗಲ್ ಮ್ಯಾಪ್ ಮೊರೆ ಹೋಗಿದ್ದು ಅದರಂತೆ ಬರೇಲಿ ಸಮೀಪದ ನಿರ್ಮಾಣ ಹಂತದ ಸೇತುವೆಯ ದಾರಿ ತೋರಿಸಿದೆ. ಅದರಂತೆ ಕಾರು ಚಾಲಕ ಅದೇ ಮಾರ್ಗವನ್ನು ಅನುಸರಿಸಿಕೊಂಡು ಹೋಗಿದ್ದ ವೇಳೆ, ಅಪೂರ್ಣಗೊಂಡಿದ್ದ ಸೇತುವೆ ಚಲಿಸಿ, ಕಾರು ಸುಮಾರು ಐವತ್ತು ಅಡಿ ಆಳದ ರಾಮಗಂಗಾ ನದಿಗೆ ಬಿದ್ದಿದೆ.

ಈ ಘಟನೆ ರಾತ್ರಿ ನಡೆದಿದ್ದ ಕಾರಣ ವಿಚಾರ ಯಾರಿಗೂ ತಿಳಿದಿರಲಿಲ್ಲ. ಮರುದಿನ ಅಲ್ಲಿನ ಸ್ಥಳೀಯರು ನದಿಗೆ ಬಿದ್ದಿರುವ ಕಾರೊಂದನ್ನು ಗಮನಿಸಿದ್ದಾರೆ. ಬಳಿಕ ಕಾರಿನ ಬಳಿ ತೆರಳಿದಾಗ ನಲ್ಲಿ ಮೂವರು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಮೃತ ಕುಟುಂಬದ ಸದಸ್ಯರು ಘಟನಾ ಸ್ಥಳಕ್ಕೆ ಧಾವಿಸಿ ಸೇತುವೆ ನಿರ್ಮಾಣ ಅಧಿಕಾರಿಯ ವಿರುದ್ಧ ಕಿಡಿಕಾರಿದ್ದಾರೆ, ಸೇತುವೆಗೆ ಬ್ಯಾರಿಕೇಡ್ ಇಡದೆ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

error: Content is protected !!