ನಗರದ ಉದ್ಯಾನವನಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲೀಕರಿಗೆ ದಂಡ..!: “ನಾಯಿಗಳ ತ್ಯಾಜ್ಯ ವಿಲೇವಾರಿಗೆ ಮಾಲಿಕರೇ ಕೈ ಚೀಲ ತರಲಿ”: ಹೈಕೋರ್ಟ್ ಆದೇಶ

ಸಾಂದರ್ಭಿಕ ಚಿತ್ರ

ನಗರದ ಉದ್ಯಾನವನಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲೀಕರಿಗೆ ದಂಡ ವಿಧಿಸುವಂತೆ ಹಾಗೂ ನಾಯಿಗಳ ತ್ಯಾಜ್ಯ ವಿಲೇವಾರಿಗೆ ಮಾಲಿಕರೇ ಕೈ ಚೀಲ ತರಲಿ ಎಂದು ಹೈಕೋರ್ಟ್ ಆದೇಶಿಸಿದೆ.

ಉದ್ಯಾನವನಗಳಲ್ಲಿ ಸಾಕು ನಾಯಿಗಳಿಂದ ಆಗುತ್ತಿರುವ ಮಲ ವಿಸರ್ಜನೆಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿ “ಕಂಪ್ಯಾಷನ್ ಅನ್‌ಲಿಮಿಟೆಡ್ ಪ್ಲಸ್ ಅಕ್ಷನ್ (ಕ್ಯೂಪ) ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಉದ್ಯಾನವನಗಳ ಸ್ವಚ್ಛತೆಗೆ ಸಂಬಂಧಿಸಿದಂತೆ ಕೆಲವು ಮಾರ್ಗಸೂಚಿಗಳನ್ನು ರಚಿಸಿ ಆದೇಶಿಸಿತು.

ನಗರದ ಉದ್ಯಾನವನ ಪ್ರದೇಶ ಮತ್ತು ಅದರ ಆವರಣದಲ್ಲಿ ಉಗುಳುವುದು, ಕಸವನ್ನು ಎಸೆಯಿವುದು, ಸಾಕು ಪ್ರಾಣಿಗಳ ಮಲ ವಿಸರ್ಜನೆಗೆ ಅವಕಾಶ ಮಾಡುವವರನ್ನು ನಿಯಂತ್ರಿಸಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಮತ್ತು ಅದನ್ನು ಉಲ್ಲಂಘಿಸುವವರ ವಿರುದ್ಧ ದಂಡವನ್ನು ವಿಧಿಸುವ ಕಾರ್ಯವನ್ನು ತೋಟಗಾರಿಕೆ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜವಾಬ್ದಾರಿಯಾಗಿರಲಿದೆ. ತೋಟಗಾರಿಕೆ ಇಲಾಖೆಯ ಒಬ್ಬ ಅಧಿಕಾರಿ ಮತ್ತು ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ಮೂವರು ಸದಸ್ಯರ ತಂಡವನ್ನು ರಚಿಸಿ, ಕಾಲ ಕಾಲಕ್ಕೆ ನಗರದ ಎಲ್ಲ ಪ್ರಮುಖ ಉದ್ಯಾನವನಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಸ್ವಚ್ಛತೆಗೆ ಸಂಬಂಧಿಸಿದಂತೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಸಂಬಂಧದ ಮಾಹಿತಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೈಕೋರ್ಟ್ ತಿಳಿಸಿದೆ.

error: Content is protected !!