“ಉಡುಪಿಯ ಪೇಜಾವರ ಸ್ವಾಮೀಜಿ ಮನುಸ್ಮತಿ ಪ್ರತಿಪಾದನೆ ಮಾಡುತ್ತಾರೆ: ಸಂವಿಧಾನ ರಕ್ಷಿಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಉಡುಪಿಯ ಪೇಜಾವರ ಸ್ವಾಮೀಜಿ ಅವರು ಮನುಸ್ಮತಿ ಪ್ರತಿಪಾದನೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.26ರಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಜಾರಿ ದಿನಾಚರಣೆಯಲ್ಲಿ ಹೇಳಿದ್ದಾರೆ.

ವಕ್ಫ್ ಮಂಡಳಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸನಾತನ ಮಂಡಳಿ ರಚನೆ ಆಗಬೇಕು. ನಮಗೆ ಗೌರವ ತರುವಂತಹ ಸಂವಿಧಾನ ಜಾರಿಯಾಗಬೇಕು ಎಂದು ಪೇಜಾವರಶ್ರೀ ಈಚೆಗೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ, ಸಂವಿಧಾನಕ್ಕೆ ವಿರುದ್ಧ ಇರುವವರು ಮಾತ್ರ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಾರೆ. ಪೇಜಾವರ ಶ್ರೀ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಇಂಥ ಹೇಳಿಕೆ ನೀಡುವ ಅಗತ್ಯವೇನಿತ್ತು? ಅವರೂ ಮನುಸ್ಮತಿ ಪ್ರತಿಪಾದನೆ ಮಾಡುತ್ತಾರೆ. ಸಂವಿಧಾನ ರಕ್ಷಿಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದೆ. ಮೇಲು-ಕೀಳು, ಮೇಲ್ಜಾತಿ-ಕೆಳಜಾತಿ ಎಂಬ ತಾರತಮ್ಯ ಸರಿ ಅಲ್ಲ. ಇಂತಹ ಅಲಿಖೀತ ಸಂವಿಧಾನವನ್ನು ನಾವು ಒಪ್ಪಿಕೊಂಡುಬಿಟ್ಟಿದ್ದೇವೆ. ಇದನ್ನು ಪ್ರತಿಪಾದಿಸುವುದೇ ಮನುಸ್ಮತಿ. ಇದನ್ನು ಪ್ರಚುರಪಡಿಸುವವರೇ ಆರ್ ಎಸ್ ಎಸ್ ಮತ್ತು ಬಿಜೆಪಿ ಎಂದು ಆರೋಪಿಸಿದ್ದಾರೆ.

error: Content is protected !!