ತಾಯಿ, ಗರ್ಭಿಣಿ ಪತ್ನಿ ಹಾಗೂ ಇಬ್ಬರು ಮಕ್ಕಳ ಕೊಲೆ ಪ್ರಕರಣ: ಅಪರಾಧಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು..!

ಮೈಸೂರು ಜಿಲ್ಲಾ ಸೆಷನ್‌ ನ್ಯಾಯಾಲಯ

ಮೈಸೂರು: ತಾಯಿ, ಗರ್ಭಿಣಿ ಪತ್ನಿ ಹಾಗೂ ಇಬ್ಬರು ಮಕ್ಕಳ ಕೊಲೆ ಪ್ರಕರಣದ ಅಪರಾಧಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಮೈಸೂರಿನ 5ನೇ ಅಧಿಕ ಜಿಲ್ಲಾ ಸೆಷನ್ ನ್ಯಾಯಾಲಯ ತೀರ್ಪು ನೀಡಿದೆ.

ಅಪರಾಧಿ ಮಣಿಕಂಠ ಸ್ವಾಮಿ ಎಂಬಾತ ವಿಶೇಷಚೇತನನಾಗಿದ್ದು, ಈತ ತನ್ನ ಹೆಂಡತಿಯ ಶೀಲ ಶಂಕಿಸಿ 2021ರ ಏಪ್ರಿಲ್ 28ರಂದು ತನ್ನ ಮನೆಯಲ್ಲೇ ಕೊಲೆ ಮಾಡಿದ್ದ. ಈ ವೇಳೆ ಆತನ ಪತ್ನಿ ತುಂಬು ಗರ್ಭಿಣಿಯಾಗಿದ್ದಳು. ಅಲ್ಲದೆ ತಾಯಿ ಕೆಂಪಾಜ್ಜಮ್ಮ ಹಾಗೂ 4 ವರ್ಷದ ಹಾಗೂ ಒಂದೂವರೆ ವರ್ಷದ ಇಬ್ಬರು ಗಂಡು ಮಕ್ಕಳನ್ನು ಹತ್ಯೆ ಮಾಡಿದ್ದ. ಈವರೆಲ್ಲರನ್ನೂ ರಾತ್ರಿ ಮಲಗಿದ್ದ ವೇಳೆ ತನ್ನ, ಅಂಗವಿಕಲ ಸಾಧನದಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ.

ಘಟನ ಸಂಬಂಧ ಸರಗೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಸಂಬAಧ ಪ್ರಕರಣ ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ಸಾಕ್ಷ್ಯಾಧಾರಗಳನ್ನ ಪರಿಶೀಲಿಸಿದ ನ್ಯಾಯಾಧೀಶರಾದ ಗುರುರಾಜ್ ಸೋಮಕ್ಕಳವರ್, ಮಣಿಕಂಠ ಸ್ವಾಮಿಯು ಕೊಲೆ ಮಾಡಿರುವ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ, ಆರೋಪಿಯನ್ನು ಅಪರಾಧಿಯೆಂದು ತೀರ್ಮಾನಿಸಿ, ಮರಣ ದಂಡನೆ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಮೃತಳ ತಾಯಿ ಹಾಗೂ ಆರೋಪಿಯ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡಲು ಪ್ರಕರಣವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಕಳಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ. ಇ. ಯೋಗೇಶ್ವರ ವಾದ ಮಂಡಿಸಿದ್ದರು.

error: Content is protected !!