ಚಾಮರಾಜನಗರ: ಆಹಾರ ಅರಸಿ ಬಂದ ಆನೆಮರಿಯೊಂದು ವಿದ್ಯುತ್ ಶಾಕ್ಗೆ ಪ್ರಾಣ ಕಳೆದುಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದ ಕಾಡಂಚಿನಲ್ಲಿ ನಡೆದಿದೆ.
ವ್ಯಕ್ತಿಯೊಬ್ಬರು ಜಮೀನಿನಲ್ಲಿ ರಾಗಿ ಬೆಳೆದಿದ್ದು, ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಹೀಗಾಗಿ ಆಹಾರ ಅರಸಿ ಬಂದ ಮರಿಆನೆ ವಿದ್ಯುತ್ ಪ್ರವಹಿಸಿ ಅಸುನೀಗಿದೆ.
ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.