ಚೆನ್ನೈ: ‘ಫೆಂಗಲ್’ ಚಂಡಮಾರುತವಾಗಿ ತೀವ್ರಗೊಂಡಿದ್ದು ಇಂದು (ನ.30) ಪುದುಚೇರಿ ಬಳಿ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಟಿಸಿದೆ.
ಗಾಳಿಯ ವೇಗ ಗಂಟೆಗೆ 90 ಕಿ.ಮೀ. ಇರಲಿದ್ದು, ತಮಿಳುನಾಡು ಮತ್ತು ಪುದುಚೇರಿಯ ಹಲವು ಜಿಲ್ಲೆಗಳಿಗೆ ಇಲಾಖೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು, ಕಾಂಚೀಪುರಂ, ವಿಲ್ಲುಪುರಂ, ಕಲ್ಲಕುರಿಚಿ ಮತ್ತು ಕಡಲೂರುಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.
ಶನಿವಾರ ಮಧ್ಯಾಹ್ನ ಗಂಟೆಗೆ 90 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ಚಂಡಮಾರುತ ಪುದುಚೇರಿಗೆ ಸಮೀಪವಿರುವ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಲಿದೆ. ಬಳಿಕ ಉತ್ತರ ತಮಿಳುನಾಡು-ಪುದುಚೇರಿ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದಿದೆ.
ಸದ್ಯಕ್ಕೆ ತಿರುವರೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳ ಆರು ಪರಿಹಾರ ಕೇಂದ್ರಗಳಲ್ಲಿ 164 ಕುಟುಂಬಗಳಿಗೆ ಸೇರಿದ ಒಟ್ಟು 471 ಮಂದಿಗೆ ವಸತಿ ಕಲ್ಪಿಸಲಾಗಿದೆ.