1988ರ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 104 ವರ್ಷದ ವೃದ್ಧನಿಗೆ ಮಧ್ಯಂತರ ಜಾಮೀನು..!

ನವದೆಹಲಿ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 104 ವರ್ಷದ ವೃದ್ಧನಿಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

1988 ರಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಅಪರಾಧಿಯಾಗಿ ರಸಿಕ್ ಚಂದ್ರ ಮೊಂಡಲ್ 1994 ರಿಂದ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. 2018 ರಲ್ಲಿ, ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕೋಲ್ಕತ್ತಾ ಹೈಕೋರ್ಟ್ ವಜಾಗೊಳಿಸಿತ್ತು. 2020 ರಲ್ಲಿ, ಮೊಂಡಲ್ ಅವರು 99 ವರ್ಷ ವಯಸ್ಸಿನವರಾಗಿದ್ದಾಗ, ಬಿಡುಗಡೆ ಕೋರಿ ಮನವಿ ಸಲ್ಲಿಸಿದ್ದರು. ಈ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ 2021ರಲ್ಲಿ ನೋಟಿಸ್ ನೀಡಿತ್ತು.

ರಸಿಕ್ ಚಂದ್ರ ಮೊಂಡಲ್ ಅವರು 104ನೇ ವರ್ಷಕ್ಕೆ ಕಾಲಿಡಲಿದ್ದು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠವು ಈ ಸಂದರ್ಭ ಜಾಮೀನು ನೀಡಿ ಆದೇಶಿಸಿದೆ. ಮೊಂಡಲ್ ಅವರ ವಯಸ್ಸು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡುತ್ತಿರುವುದಾಗಿ ಪೀಠ ಹೇಳಿದೆ. ಮೊಂಡಲ್ ಅವರಿಗೆ ವಯಸ್ಸಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿವೆ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ, ಅರ್ಜಿದಾರರಾದ ರಸಿಕ್ ಚಂದ್ರ ಮೊಂಡಲ್ ಅವರನ್ನು ಪ್ರಸ್ತುತ ರಿಟ್ ಅರ್ಜಿ ಬಾಕಿ ಇರುವಾಗ, ವಿಚಾರಣಾ ನ್ಯಾಯಾಲಯವು ನಿಯಮಗಳು ಮತ್ತು ಷರತ್ತುಗಳನ್ನು ವಿಧಿಸಿ ಮಧ್ಯಂತರ ಜಾಮೀನು / ಪೆರೋಲ್ ಮೇಲೆ ಬಿಡುಗಡೆ ಮಾಡಬೇಕೆಂದು ಮಧ್ಯಂತರ ಆದೇಶದಲ್ಲಿ ಪೀಠ ನಿರ್ದೇಶಿಸಿದೆ.

error: Content is protected !!