ಚೆನ್ನೈ: ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.
ಶನಿವಾರ ರಾತ್ರಿ 10.30ರ ವೇಳೆಗೆ ಚಂಡಮಾರುತ ಪುದುಚೇರಿ ಬಳಿ ತಮಿಳುನಾಡು ಕರಾವಳಿಯನ್ನು ದಾಟಿದೆ. ವಿಳ್ಳುಪುರಂ, ಕಲ್ಲಕುರಿಚಿ ಮತ್ತು ಗುಡಲೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತದಿಂದ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಡಿಸೆಂಬರ್ 3ರಂದು ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.