ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ; ಡಿ 04 ಮಂಗಳೂರಿನಲ್ಲಿ ಬೃಹತ್ ಜನಾಂದೋಲನ ಜಾಥ: ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ :

ಬೆಳ್ತಂಗಡಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ, ಅವರ ರಕ್ಷಣೆಗೆ ಆಗ್ರಹಿಸಿ ಡಿಸೆಂಬರ್ 04 ರಂದು ಬೃಹತ್ ಜನಾಂದೋಲನ ಜಾಥ ನಡೆಯಲಿದೆ.ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತಿಳಿಸಿದರು.

ಅವರು ಡಿ 02 ಸೋಮವಾರ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.‌ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ , ಧಾರ್ಮಿಕ ಶ್ರಧ್ದಾ ಕೇಂದ್ರಗಳು ಮಠಾದೀಶರ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಹಿಂದೂಗಳು ಜೀವಭಯದಲ್ಲಿ ಇರುವಂತಹ ಸ್ಥಿತಿ ನಿರ್ಮಾಣವಾಗಿದೆ. ಸುಳ್ಳು ಆರೋಪಗಳ ಮೂಲಕ ಸ್ವಾಮೀಜಿಗಳ ಮೇಲೆ ಪ್ರಕರಣಗಳನ್ನು ದಾಖಲಿಸಿ ಅವರ ಆತ್ಮ ಸ್ಥೈರ್ಯ ಕುಗ್ಗಿಸುವ ಕೆಲಸ ನಡೆಯುತ್ತಿದೆ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟು ಹಿಂದೂಗಳಿಗೆ ರಕ್ಷಣೆಯನ್ನು ನೀಡಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂ ಸಂಘಟನೆಗಳ ಮೂಲಕ ಬೃಹತ್ ಪ್ರತಿಭಟನೆ ಹಾಗೂ ಜನಾಂದೋಲನಾ ಜಾಥ ನಡೆಯಲಿದೆ. ಬೆಳಿಗ್ಗೆ 10 ಗಂಟೆ ಕ್ಲಾಕ್ ಟವರ್ ಬಳಿಯಿಂದ ತಾಲೂಕು ಕಛೇರಿಯವರಿಗೆ ಜಾಥ ನಡೆಯಲಿದೆ.

ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸಹಸ್ರಾರು ಮಂದಿ ಹಿಂದು ಬಂಧುಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.‌ ಪತ್ರಿಕಾಗೋಪ್ಠಿಯಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಬಿಜೆಪಿ ಮಂಡಲ ಅಧ್ಯಕ್ಷ ಪ್ರಶಾಂತ್ ಪಾರೆಂಕಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಧರ್ಮಸ್ಥಳ, ಉಪಸ್ಥಿತರಿದ್ದರು.

error: Content is protected !!