ಬಂಟ್ವಾಳ ಮಂಗಳೂರು ವಿಲ್ಲುಂಪುರಂ ರಾಷ್ಟ್ರೀಯ ಹೆದ್ದಾರಿಯ ವಗ್ಗ ಬಳಿ ಕೆಎಸ್ಆರ್ ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ 05 ಗುರುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನಡಿಕಟ್ಟೆ ನಿವಾಸಿ ರಾಜೇಂದ್ರ (45) ಎಂದು ಗುರುತಿಸಲಾಗಿದೆ. ಬಂಟ್ವಾಳದಿಂದ ತನ್ನ ಬೈಕಿನಲ್ಲಿ ಬೆಳ್ತಂಗಡಿ ಕಡೆಗೆ ಬರುತಿದ್ದಾಗ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತಿದ್ದ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಂಟ್ವಾಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.