ಉಜಿರೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಸವಾರ ಗಂಭೀರ ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಬೆಳಾಲ್ ರಸ್ತೆಯಲ್ಲಿ ನಡೆದಿದೆ.
ಉಜಿರೆಯಿಂದ ಬೆಳಾಲು ಕಡೆಗೆ ಹೋಗುತಿದ್ದ ದ್ವಿಚಕ್ರ ಹಾಗೂ ಬೆಳಾಲು ಕಡೆಯಿಂದ ಉಜಿರೆಯತ್ತ ಬರುತಿದ್ದ ಕಾರು ನಡುವೆ ಮಾಚಾರು ಸಮೀಪದ ನಿನ್ನಿಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ದ್ವಿಚಕ್ರ ಸವಾರನಿಗೆ ಗಂಭೀರ ಗಾಯಗಳಾಗಿದೆ. ತಕ್ಷಣ ಸ್ಥಳೀಯರು ಗಾಯಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.