ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಪೊಲೀಸ್ ವಾಹನ ಡಿಕ್ಕಿಯಾದ ಘಟನೆ ಕಾನ್ಪುರದಲ್ಲಿ ನಡೆದಿದೆ.
ರಸ್ತೆ ದಾಟಲು ಮುಂದಾದ ವ್ಯಕ್ತಿಗೆ ಹಿಂದಿನಿಂದ ಬಂದ ಪೊಲೀಸ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವ್ಯಕ್ತಿ ಗಾಳಿಯಲ್ಲಿ ಹಾರಿ ಹೋಗಿ ರಸ್ತೆಯ ಪಕ್ಕಕ್ಕೆ ಬಿದ್ದಿದ್ದು ಬಳಿಕ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ವಾಹನ ಚಲಾಯಿಸುತ್ತಿದ್ದ ಕಾನ್‌ಸ್ಟೆಬಲ್ ಅಪಘಾತದ ನಂತರ ವ್ಯಕ್ತಿಯ ಕುಟುಂಬದೊಂದಿಗೆ ಒಪ್ಪಂದಕ್ಕೆ ಬಂದಿದ್ದರು. ಪ್ರಕರಣದ ಕುರಿತು ಮಾತನಾಡಿದ ಕಾನ್ಪುರ ಪೊಲೀಸ್‌ನ ಹೆಚ್ಚುವರಿ ಡಿಸಿಪಿ ವಿಜೇಂದ್ರ ಕುಮಾರ್ ದ್ವಿವೇದಿ, ಈ ವಿಷಯದಲ್ಲಿ, ಯಾರಿಂದಲೂ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ, ಆದ್ದರಿಂದ ಸದ್ಯಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.